
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ (NTPC) ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು C&I ವಿಭಾಗಗಳಲ್ಲಿ 135 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಸಂಬಂಧಿತ ಎಂಜಿನಿಯರಿಂಗ್ ವಿಭಾಗದಲ್ಲಿ ಕನಿಷ್ಠ ಶೇ.60 ಅಂಕಗಳೊಂದಿಗೆ ಪದವಿ ಪಡೆದಿರಬೇಕು ಮತ್ತು 10 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
ಆಸಕ್ತರು ಆಗಸ್ಟ್ 26ರೊಳಗೆ www.ntpc.co.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರು ತಿಂಗಳಿಗೆ ₹70,000 ದಿಂದ ₹2,00,000 ವೇತನ ಪಡೆಯಲಿದ್ದಾರೆ.