
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಈವರೆಗೆ ಸುಮಾರು ₹400 ಕೋಟಿ ಅನುದಾನ ಹರಿದುಬಂದಿದ್ದು, ಜನರ ಜೀವನಮಟ್ಟ ಸುಧಾರಣೆಯಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸೊರಬ ಪ್ರವಾಸಿ ಮಂದಿರದಲ್ಲಿ 11 ಗ್ರಾಮ ಪಂಚಾಯಿತಿಗಳ ಮುಖಂಡರ ಸಭೆ ನಡೆಸಿದ ಸಚಿವರು, ಪ್ರತಿ ಗ್ರಾಮ ಪಂಚಾಯಿತಿಗೆ ತಲಾ ₹1 ಕೋಟಿ ಅನುದಾನ ನೀಡಿರುವುದಾಗಿ ಘೋಷಿಸಿದ್ದಾರೆ.
ಮದ್ಯಪಾನ ಮಾಡಿ ಶಾಲೆಗೆ ಬಂದ ಮಂಚಿ ಗ್ರಾಮದ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸಚಿವರು ಸ್ಥಳದಲ್ಲೇ ಸೂಚನೆ ನೀಡಿದ್ದಾರೆ.