
ಬೆಂಗಳೂರು-ಚೆನ್ನೈ ಕೈಗಾರಿಕಾ ಕಾರಿಡಾರ್ ಅಡಿಯಲ್ಲಿ ತುಮಕೂರಿನಲ್ಲಿ ಕೈಗಾರಿಕಾ ನೋಡ್ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರಿಂದ 7,000 ಕೋಟಿ ರೂಪಾಯಿ ಹೂಡಿಕೆ ಹರಿದು ಬರಲಿದೆ.
ತುಮಕೂರು ನೋಡ್ ಅಭಿವೃದ್ಧಿಗಾಗಿ 1,736 ಎಕರೆ ಭೂಮಿ ಮೀಸಲಿಡಲಾಗಿದ್ದು, ಈ ಯೋಜನೆಯಿಂದ 88,000ಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿದ್ದು, 2027ರ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ.
ಈ ಕಾರಿಡಾರ್‌ನಲ್ಲಿ ಜಪಾನ್ ಟೌನ್‌ಶಿಪ್‌ಗಾಗಿ 300 ಎಕರೆ ಮತ್ತು ಜಿಂದಾಲ್ ಅಲ್ಯೂಮಿನಿಯಂ ಕಂಪನಿಗೆ 151 ಎಕರೆ ಭೂಮಿ ಮಂಜೂರು ಮಾಡಲಾಗಿದ್ದು, ಈಗಾಗಲೇ ಶೇ.30ರಷ್ಟು ಭೌತಿಕ ಪ್ರಗತಿ ಸಾಧಿಸಲಾಗಿದೆ.