
ಕೆಪಿಎಸ್ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಶಿವಶಂಕರಪ್ಪ ಸಾಹುಕಾರ್ ಅವರ 21 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದೆ.
ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ನಿವಾಸ ಸೇರಿದಂತೆ ವಿವಿಧೆಡೆ ಸತತ 22 ಗಂಟೆಗಳಿಂದ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿ ನೇಮಕಾತಿಗೆ 80 ಲಕ್ಷ ರೂಪಾಯಿ ಲಂಚ ಪಡೆದ ಆರೋಪವಿದ್ದು, ಪಶುವೈದ್ಯಕೀಯ ನೇಮಕಾತಿ ಅಕ್ರಮಗಳ ಬಗ್ಗೆ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.