
ತೀವ್ರ ಬರದ ಸ್ಥಿತಿಯ ನಡುವೆಯೂ ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ ನಿತ್ಯ 4 ಸಾವಿರ ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ.
ದೆಹಲಿಯಲ್ಲಿ ವಿನೀತ್ ಗುಪ್ತಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕಾವೇರಿ ಜಲಾಶಯಗಳಲ್ಲಿ ಒಳಹರಿವು ಕಡಿಮೆಯಾಗಿದೆ.
ಸಿಡಬ್ಲ್ಯುಆರ್ಸಿ ಶಿಫಾರಸು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದು, ಈ ಬಗ್ಗೆ ಸಂಜೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.