
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯ ವಿಚಾರಣೆಯು ಅಕ್ಟೋಬರ್ 13ರಂದು ನಡೆಯಲಿದ್ದು, ರಾಹುಲ್ ಗಾಂಧಿ ಅವರ ಪರ ವಕೀಲ ಎಸ್. ಪ್ರಸನ್ನ ಅವರು ಸೋಮವಾರ ಸಂಜೆ ದಾಖಲಾತಿ ವಿಭಾಗ ಮುಚ್ಚುವ ಮುನ್ನ ಈ ಅರ್ಜಿಯನ್ನು ಸಲ್ಲಿಸಿದ್ದಾರೆ.
ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ವಿರೋಧಿಸಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.