
ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಇಂಗ್ಲಿಷ್ ಟ್ರೇಲರ್ ಇಂದು ರಾತ್ರಿ 8.30ಕ್ಕೆ ಅಧಿಕೃತವಾಗಿ ಬಿಡುಗಡೆಯಾಗಲಿದ್ದು, ಜಾಗತಿಕ ಮಾರುಕಟ್ಟೆಯನ್ನು ಗುರಿಯಾಗಿಸಲಾಗಿದೆ.
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ಹಾಲಿವುಡ್ ಶೈಲಿಯ ಮೇಕಿಂಗ್ ಹೊಂದಿದೆ.
ಕನ್ನಡದ ಜೊತೆಗೆ ಇಂಗ್ಲಿಷ್‌ನಲ್ಲೂ ಶೂಟ್ ಮಾಡಲಾಗಿರುವ ಈ ಚಿತ್ರವು ಆಗಸ್ಟ್ 26ರಂದು ಬಿಡುಗಡೆಯಾಗಲಿದ್ದು, ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.