
ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೆ ಸರ್ಕಾರ ಹೆಣಗಾಡುತ್ತಿರುವ ಮಧ್ಯೆ, ಬಾಕಿ ಇರುವ 38,000 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿಗೆ ಪತ್ರ ಬರೆದು ಆಗ್ರಹಿಸಿದೆ.
ಉಪಮುಖ್ಯಮಂತ್ರಿಯಾಗಿದ್ದಾಗ ಗುತ್ತಿಗೆದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಸಂಘವು, 2021-22ರಿಂದ ಇಲ್ಲಿಯವರೆಗೆ ಇಲಾಖೆಗಳಲ್ಲಿ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಯಾಗಿಲ್ಲ ಎಂದು ತಿಳಿಸಿದೆ.
ಬಾಕಿ ಹಣವನ್ನು ತುರ್ತಾಗಿ ಬಿಡುಗಡೆ ಮಾಡುವುದು, ಸ್ಪೆಷಲ್ ಎಲ್ಒಸಿ ನೀಡುವುದನ್ನು ತಡೆಹಿಡಿಯುವುದು ಮತ್ತು ಇಲಾಖೆಗಳಲ್ಲಿ ಜೇಷ್ಠತೆ ಪ್ರಕಾರ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಸಂಘವು ಒತ್ತಾಯಿಸಿದೆ.