
ಬೆಂಗಳೂರಿನಲ್ಲಿ ಮತ್ತೊಂದು ಕಾನೂನು ವಿಶ್ವವಿದ್ಯಾಲಯ ಸ್ಥಾಪಿಸುವ ಸರ್ಕಾರದ ನಿರ್ಧಾರವನ್ನು ಕೈಬಿಡಬೇಕೆಂದು ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಸಿಎಂಗೆ ಪತ್ರ ಬರೆದಿದ್ದಾರೆ.
2009ರಿಂದ ಕಾರ್ಯನಿರ್ವಹಿಸುತ್ತಿರುವ ಹುಬ್ಬಳ್ಳಿಯ ಕಾನೂನು ವಿಶ್ವವಿದ್ಯಾಲಯಕ್ಕೆ ಮೂಲಸೌಕರ್ಯ ಮತ್ತು ಕಾಯಂ ಉಪನ್ಯಾಸಕರ ಕೊರತೆಯಿದ್ದು, ಸರ್ಕಾರ ಆ ಕಡೆ ಗಮನ ಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಈಗಾಗಲೇ 10ಕ್ಕೂ ಹೆಚ್ಚು ಕಾನೂನು ವಿವಿಗಳಿದ್ದು, ಹೊಸ ವಿವಿ ಸ್ಥಾಪನೆಯು ಉತ್ತರ ಕರ್ನಾಟಕದ ಜನರಲ್ಲಿ ತಾರತಮ್ಯದ ಭಾವನೆ ಮೂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.