
ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ವಿಶ್ವಾದ್ಯಂತ ಬಿಡುಗಡೆಯಾಗಿದ್ದು, ಅಡ್ವಾನ್ಸ್ ಬುಕಿಂಗ್ ಮೂಲಕವೇ 40 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿ ಹೊಸ ದಾಖಲೆ ಬರೆದಿದೆ.
ಬುಕ್‌ಮೈಶೋನಲ್ಲಿ ಈಗಾಗಲೇ 7 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿದ್ದು, ಮೊದಲ ದಿನವೇ ಸಿನಿಮಾ 100 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆಯಿದೆ ಎಂದು ಬಾಕ್ಸ್ ಆಫೀಸ್ ಪಂಡಿತರು ಅಂದಾಜಿಸಿದ್ದಾರೆ.
ಯುಕೆ ಒಂದರಲ್ಲೇ 400ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಸಿನಿಮಾ ಬಿಡುಗಡೆಯಾಗಿದ್ದು, ಹಿಂದಿ ಮಾರುಕಟ್ಟೆಯಲ್ಲಿ ಮೊದಲ ದಿನವೇ 30 ರಿಂದ 40 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆಯಿದೆ.