
ಕರ್ನಾಟಕದ 71ನೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಕನ್ನಡಿಗರಿಗೆ ಶುಭಾಶಯ ಕೋರಿದ್ದಾರೆ.
ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲಿ ರಾಜ್ಯದ ಜನರು ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಕನ್ನಡಿಗರಿಗೆ ರಾಜ್ಯೋತ್ಸವದ ಶುಭ ಹಾರೈಸಿದ್ದಾರೆ.