
ಹಾಸನಾಂಬೆ ಜಾತ್ರಾಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ದೇವಿಯ ದರ್ಶನಕ್ಕೆ ಇನ್ನೂ ಆರು ದಿನಗಳು ಮಾತ್ರ ಬಾಕಿ ಇವೆ.
ದೇವಿಗೆ ನೈವೇದ್ಯ ಸಮರ್ಪಿಸುವ ಹಾಗೂ ವಿಶೇಷ ಅಲಂಕಾರಗಳನ್ನು ಬದಲಾಯಿಸುವ ಹಿನ್ನೆಲೆಯಲ್ಲಿ ಇಂದು ರಾತ್ರಿ 12 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಭಕ್ತರ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ದರ್ಶನವಿಲ್ಲದ ಈ ಅವಧಿಯಲ್ಲಿ ದೇವಿಗೆ ಸಂಬಂಧಿಸಿದ ಧಾರ್ಮಿಕ ವಿಧಿವಿಧಾನಗಳು ನಡೆಯಲಿದ್ದು, ಭಕ್ತರು ಮುಂಜಾನೆ 6 ಗಂಟೆಯಿಂದ ದರ್ಶನಕ್ಕೆ ಆಗಮಿಸುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ.