
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಗರಿಷ್ಠ ತಾಪಮಾನ 31.7 ಡಿಗ್ರಿ ಸೆಲ್ಶಿಯಸ್ ದಾಖಲಾಗಿದ್ದು, ಮೂರು ವರ್ಷಗಳ ನಂತರ ಸೆಪ್ಟೆಂಬರ್‌ನಲ್ಲಿ ಇಷ್ಟು ಹೆಚ್ಚಿನ ಉಷ್ಣಾಂಶ ದಾಖಲಾಗಿದೆ.
ಮಳೆ ಮತ್ತು ಮೋಡಗಳ ಕೊರತೆ ಹಾಗೂ ಎಲ್ ನಿನೊ ಪರಿಣಾಮದಿಂದಾಗಿ ತಾಪಮಾನ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಇದು 33 ಡಿಗ್ರಿ ಸೆಲ್ಶಿಯಸ್ ಆಸುಪಾಸಿಗೆ ತಲುಪುವ ಸಾಧ್ಯತೆಯಿದೆ.
ಸೆಪ್ಟೆಂಬರ್ 16ರವರೆಗೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇದೇ ರೀತಿಯ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.