
ಎಲ್‌ಪಿಜಿ ಸಬ್ಸಿಡಿ ಪಡೆಯಲು ಇ-ಕೆವೈಸಿ ಪೂರ್ಣಗೊಳಿಸಲು ಆಗಸ್ಟ್ 16 ಕೊನೆಯ ದಿನವಾಗಿದ್ದು, ರಾಜ್ಯದ ಗ್ಯಾಸ್ ಏಜೆನ್ಸಿಗಳ ಮುಂದೆ ಗ್ರಾಹಕರ ದಂಡು ಹರಿದುಬರುತ್ತಿದೆ.
ಬೆಂಗಳೂರಿನಲ್ಲಿ 14.2 ಕೆಜಿ ಸಿಲಿಂಡರ್ ದರ 945 ರೂಪಾಯಿ ಇದ್ದು, ಉಜ್ವಲ ಯೋಜನೆ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿ ಸಿಗಲಿದೆ.
ಗಡುವು ಮುಗಿದ ನಂತರ ಇ-ಕೆವೈಸಿ ಮಾಡಿಸದ ಗ್ರಾಹಕರು ಸಬ್ಸಿಡಿ ರಹಿತವಾಗಿ ಮಾರುಕಟ್ಟೆ ದರದಲ್ಲಿ ಸಿಲಿಂಡರ್ ಖರೀದಿಸಬೇಕಾಗುತ್ತದೆ ಎಂದು ತೈಲ ಕಂಪನಿಗಳು ತಿಳಿಸಿವೆ.