
ಅಕ್ಟೋಬರ್ 1 ರಿಂದ 5 ರವರೆಗೆ ಶ್ರೀನಗರದ ಶೇರ್-ಎ-ಕಾಶ್ಮೀರ ಕ್ರೀಡಾಂಗಣದಲ್ಲಿ ರಣಜಿ ಚಾಂಪಿಯನ್ ಜಮ್ಮು ಮತ್ತು ಕಾಶ್ಮೀರ ಹಾಗೂ ರೆಸ್ಟ್ ಆಫ್ ಇಂಡಿಯಾ ನಡುವೆ ಇರಾನಿ ಕಪ್ ಪಂದ್ಯ ನಡೆಯಲಿದೆ.
1980ರ ದಶಕದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಅತಿದೊಡ್ಡ ಕ್ರಿಕೆಟ್ ಪಂದ್ಯ ಇದಾಗಿದ್ದು, ಈ ಮೈದಾನದಲ್ಲಿ ಕೊನೆಯದಾಗಿ 1986ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯ ನಡೆದಿತ್ತು.
ಜಮ್ಮು ಮತ್ತು ಕಾಶ್ಮೀರ ತಂಡವು ಫೈನಲ್‌ನಲ್ಲಿ ಕರ್ನಾಟಕವನ್ನು ಸೋಲಿಸಿ 2025-26ರ ರಣಜಿ ಟ್ರೋಫಿ ಗೆದ್ದುಕೊಂಡ ನಂತರ ಈ ಐತಿಹಾಸಿಕ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿದೆ.