
ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ, ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ‘ಜೈಲರ್ 2’ ಸಿನಿಮಾ ಬಿಡುಗಡೆಯಾದ ಕೇವಲ ಮೂರೇ ದಿನಗಳಲ್ಲಿ ವಿಶ್ವಾದ್ಯಂತ ಒಟ್ಟು 317.15 ಕೋಟಿ ರೂಪಾಯಿ ಗಳಿಕೆ ಮಾಡಿದೆ.
ಈ ಚಿತ್ರವು ಭಾರತದಲ್ಲಿ 169.65 ಕೋಟಿ ರೂ.ಗಳ ಒಟ್ಟು ಗಳಿಕೆ ಹಾಗೂ 144.60 ಕೋಟಿ ರೂ.ಗಳ ನಿವ್ವಳ ಗಳಿಕೆ ದಾಖಲಿಸಿದೆ.
ಶನಿವಾರದಂದು ದೇಶಾದ್ಯಂತ 47.80 ಕೋಟಿ ರೂ. ನೆಟ್ ಕಲೆಕ್ಷನ್ ಮಾಡುವ ಮೂಲಕ ಈ ಸಿನಿಮಾವು ರಜನಿಕಾಂತ್ ಅವರ ವೃತ್ತಿಜೀವನದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ನಾಲ್ಕನೇ ದೊಡ್ಡ ಚಿತ್ರವಾಗಿ ಹೊರಹೊಮ್ಮಿದೆ.