
ಕರ್ನಾಟಕದಲ್ಲಿ 3,991 ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 2ರಂದು ನಡೆಯಲಿರುವ ಲಿಖಿತ ಪರೀಕ್ಷೆಗೆ 4,54,536ಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಒಟ್ಟು ಹುದ್ದೆಗಳ ಪೈಕಿ 3,395 ಹುದ್ದೆಗಳು ಕಲ್ಯಾಣ ಕರ್ನಾಟಕೇತರ ಪ್ರದೇಶಕ್ಕೆ ಮತ್ತು 596 ಹುದ್ದೆಗಳು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಾಗಿವೆ.
ಪಿಯುಸಿ ಕನಿಷ್ಠ ವಿದ್ಯಾರ್ಹತೆಯಾಗಿದ್ದರೂ, ಇಂಜಿನಿಯರಿಂಗ್ ಮತ್ತು ಪಿಎಚ್ಡಿ ಪದವೀಧರರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದಾರೆ.