
80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.
ಈ ಐತಿಹಾಸಿಕ ಸಮಾರಂಭದಲ್ಲಿ ಕೇಂದ್ರ ಸಂಪುಟ ಸಚಿವರು, ಸೇನಾಪಡೆಗಳ ಮುಖ್ಯಸ್ಥರು, ರಾಜತಾಂತ್ರಿಕರು ಹಾಗೂ ಸಾವಿರಾರು ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿ ಸ್ವಾತಂತ್ರ್ಯೋತ್ಸವದ ವೈಭವಕ್ಕೆ ಸಾಕ್ಷಿಯಾಗಿದ್ದಾರೆ.
ದೇಶದಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಸಡಗರ ಮುಗಿಲು ಮುಟ್ಟಿದ್ದು, ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆಯ ನಡುವೆ ಕಾರ್ಯಕ್ರಮ ನಡೆಯುತ್ತಿದೆ.