
ಯುಜಿಸಿಇಟಿ 2026ರ ಎಂಜಿನಿಯರಿಂಗ್ ಹಾಗೂ ಇತರ ಕೋರ್ಸ್‌ಗಳ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೋಮವಾರ ಲಿಂಕ್ ಬಿಡುಗಡೆ ಮಾಡಿದೆ.
ಎರಡನೇ ಸುತ್ತಿನಲ್ಲಿ ಸೀಟು ಸಿಗದವರು ಅಥವಾ ಸೀಟು ರದ್ದು ಮಾಡಿಕೊಂಡವರು ಹೊಸದಾಗಿ ಆಪ್ಷನ್ಸ್ ದಾಖಲಿಸಲು ಸೆಪ್ಟೆಂಬರ್ 3ರ ಸಂಜೆ 6 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
ಮೂರನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದ ನಂತರ ಕಾಲೇಜು ಪ್ರವೇಶ ಪಡೆಯದಿದ್ದರೆ ನಿಗದಿತ ಶುಲ್ಕದ ಐದು ಪಟ್ಟು ದಂಡ ಪಾವತಿಸಬೇಕಾಗುತ್ತದೆ ಎಂದು ಕೆಇಎ ಎಚ್ಚರಿಸಿದೆ.