
ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು, ಇಂದು 106.66 ಅಡಿ ನೀರಿದೆ; ಕಬಿನಿ ಜಲಾಶಯದಲ್ಲಿ 2,268.54 ಅಡಿ ನೀರು ಸಂಗ್ರಹವಾಗಿದೆ.
ತುಂಗಭದ್ರಾ ಜಲಾಶಯದಲ್ಲಿ 1,629.54 ಅಡಿ ಮತ್ತು ಆಲಮಟ್ಟಿ ಜಲಾಶಯದಲ್ಲಿ 519.56 ಮೀಟರ್ ನೀರಿನ ಮಟ್ಟ ದಾಖಲಾಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ತಗ್ಗಿದ್ದು, ಪ್ರಮುಖ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿದೆ, ಮಲಪ್ರಭಾ ಜಲಾಶಯಕ್ಕೆ ಇಂದು ಒಳಹರಿವು ಶೂನ್ಯವಾಗಿದೆ.