
ಕರ್ನಾಟಕದಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಯು ಹಾಗೂ ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನವೆಂಬರ್ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ.
ರಾಜ್ಯದಲ್ಲಿ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಮತ್ತು ಬಳಸಲು ಅನುಮತಿ ನೀಡಲಾಗಿದ್ದು, ಗ್ರೀನ್ ಕ್ರಾಕರ್ಸ್ ಬಾಕ್ಸ್‌ಗಳ ಮೇಲೆ ಕಡ್ಡಾಯವಾಗಿ ಕ್ಯೂಆರ್ ಕೋಡ್ ಇರಬೇಕು ಎಂದು ಸೂಚಿಸಲಾಗಿದೆ.
ಆಸ್ಪತ್ರೆಗಳು, ಶಾಲೆಗಳು ಹಾಗೂ ಪ್ರಮುಖ ಶ್ರದ್ಧಾ ಕೇಂದ್ರಗಳ ಸುತ್ತಮುತ್ತ ಪಟಾಕಿ ನಿಷೇಧ ಪ್ರದೇಶಗಳನ್ನು ಕಾಯ್ದುಕೊಳ್ಳಲು ತಿಳಿಸಲಾಗಿದ್ದು, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು.