
ರಾಜ್ಯದ ಮಾಜಿ ಶಿಕ್ಷಣ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ.ಸಿ. ನಾಗೇಶ್ ಅವರು 67ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ದೀರ್ಘಕಾಲದಿಂದ ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದ ಅವರು, ಜಯನಗರದಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಇಂದು ರಾತ್ರಿ ಕೊನೆಯುಸಿರೆಳೆದಿದ್ದಾರೆ.
2021 ರಿಂದ 2023 ರವರೆಗೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ನಾಗೇಶ್ ಅವರ ಅಂತ್ಯಕ್ರಿಯೆಯು ನಾಳೆ ಆಗಸ್ಟ್ 19 ರಂದು ಅವರ ಸ್ವಕ್ಷೇತ್ರ ತಿಪಟೂರಿನಲ್ಲಿ ನಡೆಯಲಿದೆ.