
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಹುಲಿ ಉರುಳಿಗೆ ಸಿಲುಕಿ ಮೃತಪಟ್ಟಿರುವುದು ಮತ್ತು ಕರಡಿಕಲ್ಲು ಗುಡ್ಡ ಪ್ರದೇಶದಲ್ಲಿ ಕಾಡಾನೆಯ ದಂತ ನಾಪತ್ತೆಯಾಗಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಅರಣ್ಯ ಅಧಿಕಾರಿಗಳ ಕರ್ತವ್ಯಲೋಪವನ್ನು ಪರಿಶೀಲಿಸಿ ವಾರದೊಳಗೆ ವಿವರವಾದ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ರಾಜ್ಯದ ಎಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ನೀಡಿ ಗಸ್ತು ಮತ್ತು ಭದ್ರತಾ ವ್ಯವಸ್ಥೆಯನ್ನು ಬಲಪಡಿಸುವಂತೆ ಅವರು ಸೂಚಿಸಿದ್ದಾರೆ.