
ಚಾಮರಾಜನಗರದ ಹನೂರು ತಾಲೂಕಿನ ಶಾಗ್ಯ ಗ್ರಾಮದ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಶಾಸಕ ಮಂಜುನಾಥ್ ಅವರ ಮನವೊಲಿಕೆಯಿಂದ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟಿದ್ದಾರೆ.
ಮೃತ ಕುಟುಂಬಗಳಿಗೆ ತಲಾ 15 ಲಕ್ಷ ರೂಪಾಯಿ ಪರಿಹಾರ ಮತ್ತು ಸರ್ಕಾರಿ ಉದ್ಯೋಗದ ಭರವಸೆಯನ್ನು ಶಾಸಕರು ನೀಡಿದ್ದು, ಪ್ರಕರಣದ ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಈಗಾಗಲೇ ಆದೇಶಿಸಿದ್ದಾರೆ.
ದಕ್ಷಿಣ ವಲಯ ಐಜಿಪಿ ಡಾ. ಬೋರಲಿಂಗಯ್ಯ ಹನೂರಿನಲ್ಲಿ ಮೊಕ್ಕಾಂ ಹೂಡಿದ್ದು, ಕೆ.ಆರ್. ಆಸ್ಪತ್ರೆಯ ಶವಾಗಾರದಲ್ಲಿ ಮೂರು ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಸಿದ್ಧತೆಗಳು ನಡೆಯುತ್ತಿವೆ.