
2006ರ ಏಪ್ರಿಲ್ 1ಕ್ಕಿಂತ ಮೊದಲು ನೇಮಕಾತಿ ಅಧಿಸೂಚನೆ ಹೊರಬಿದ್ದಿದ್ದರೂ ತಾಂತ್ರಿಕ ಕಾರಣಗಳಿಂದ ವಿಳಂಬವಾದ ಸುಮಾರು 4,000 ಶಿಕ್ಷಕರನ್ನು ಹಳೆಯ ಪಿಂಚಣಿ ಯೋಜನೆಗೆ (OPS) ಒಳಪಡಿಸಲು ಸರ್ಕಾರ ನಿರ್ಧರಿಸಿದೆ.
ದಶಕಗಳ ಕಾಲ ಕಾನೂನು ಹೋರಾಟ ನಡೆಸಿದ್ದ ಶಿಕ್ಷಕರ ಮನವಿಯನ್ನು ಪರಿಶೀಲಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಎನ್‌ಪಿಎಸ್‌ನಿಂದ ಒಪಿಎಸ್‌ಗೆ ಬದಲಾಯಿಸಲು ಹಸಿರು ನಿಶಾನೆ ತೋರಿಸಿದೆ.
ಅರ್ಹ ಶಿಕ್ಷಕರ ಸೇವಾ ಪುಸ್ತಕ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿದೆ.