
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಬದರಿನಾಥ ಧಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಾಂಪ್ರದಾಯಿಕ ನೃತ್ಯದಲ್ಲಿ ಭಾಗವಹಿಸಿದ್ದಾರೆ.
ನಂದಾ ಅಷ್ಟಮಿ ಹಬ್ಬದ ಶುಭ ಸಂದರ್ಭದಲ್ಲಿ ಸಮೀಪದ ಬಾಮ್ನಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ಸ್ಥಳೀಯ ಮಹಿಳೆಯರೊಂದಿಗೆ ಸೇರಿಕೊಂಡು 'ಚಾಚರಿ' ಜಾನಪದ ನೃತ್ಯಕ್ಕೆ ಹೆಜ್ಜೆ ಹಾಕಿದ್ದಾರೆ.
ಉತ್ತರಾಖಂಡದ ಶ್ರೀಮಂತ ಜಾನಪದ ಸಂಸ್ಕೃತಿಯ ಸಂಕೇತವಾಗಿರುವ ಈ ನೃತ್ಯದಲ್ಲಿ ಸಿಎಂ ಪಾಲ್ಗೊಂಡು ಸಂಭ್ರಮಿಸಿದ್ದಾರೆ.