
ರಾಜ್ಯದ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಶೇ 7.5ರಷ್ಟು ಮೀಸಲಾತಿ ಸಿಗಲಿದೆ.
ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಓದಿದ ಮಕ್ಕಳಿಗೆ ಈ ಪ್ರಯೋಜನ ಲಭ್ಯವಿದ್ದು, ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ವೃತ್ತಿಶಿಕ್ಷಣ ಕೋರ್ಸ್‌ಗಳ ಪ್ರವೇಶದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಈಗಾಗಲೇ ನೀಡಲಾಗುತ್ತಿರುವ ಶೇ 15ರಷ್ಟು ಮೀಸಲಾತಿಯಲ್ಲಿ ಅರ್ಧದಷ್ಟು ಸೀಟುಗಳನ್ನು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ.