
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 5ನೇ ಹಾಗೂ ಅಂತಿಮ ಟಿ20 ಪಂದ್ಯ ಆರಂಭವಾಗಬೇಕಿದೆ.
ಉಭಯ ತಂಡಗಳು ಈಗಾಗಲೇ ಸರಣಿಯಲ್ಲಿ ತಲಾ 2 ಪಂದ್ಯಗಳನ್ನು ಗೆದ್ದು 2-2ರಿಂದ ಸಮಬಲ ಸಾಧಿಸಿರುವುದರಿಂದ ಇಂದಿನ ನಿರ್ಣಾಯಕ ಪಂದ್ಯವು ಸರಣಿ ವಿಜೇತರನ್ನು ನಿರ್ಧರಿಸಲಿದೆ.
ಸಂಜೆಯಿಂದ ಬೆಂಗಳೂರಿನಲ್ಲಿ ಮಳೆ ಮುಂದುವರಿದಿರುವ ಕಾರಣ ಪಂದ್ಯಕ್ಕೆ ಅಡ್ಡಿಯುಂಟಾಗಿದ್ದು, ಟಾಸ್ ಪ್ರಕ್ರಿಯೆ ವಿಳಂಬವಾಗಿದೆ.