
ಕರ್ನಾಟಕ ಉಚ್ಛ ನ್ಯಾಯಾಲಯವು 20 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಶೇ. 55 ಅಂಕಗಳೊಂದಿಗೆ ಪದವಿ ಪೂರ್ಣಗೊಳಿಸಿರಬೇಕು (ಹಿಂದುಳಿದ ವರ್ಗಗಳಿಗೆ ಶೇ. 50) ಮತ್ತು ಆಯ್ಕೆಯಾದವರಿಗೆ ಮಾಸಿಕ 25,500 ರಿಂದ 81,100 ರೂ. ವೇತನ ಸಿಗಲಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19 ಕೊನೆಯ ದಿನಾಂಕವಾಗಿದ್ದು, ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹350 ಹಾಗೂ SC, ST, Cat-I ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ 200ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.