Indian Politics
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ₹1.38 ಕೋಟಿ ದಂಡ ಹಾಗೂ ಜೈಲು

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ₹1.38 ಕೋಟಿ ದಂಡ ಹಾಗೂ ಜೈಲು

prajavani56m
THE BRIEF
1

ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಸಾಬೀತಾದ ಹಿನ್ನೆಲೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್‌. ರವಿಕುಮಾರ್ ಅವರಿಗೆ ಲೋಕಾಯುಕ್ತ ನ್ಯಾಯಾಲಯ ₹1.38 ಕೋಟಿ ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.

2

2014ರಲ್ಲಿ ರವಿಕುಮಾರ್ ಅವರು ಅರಣ್ಯ ಭವನದ ಯೋಜನಾ ಶಾಖೆಯಲ್ಲಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರ ಆದಾಯಕ್ಕಿಂತ ₹1.35 ಕೋಟಿ ಹೆಚ್ಚು ಆಸ್ತಿ ಪತ್ತೆ ಮಾಡಿದ್ದರು.

3

ನ್ಯಾಯಾಧೀಶೆ ಸಿ.ಎಂ. ಪುಷ್ಪಲತಾ ಅವರು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಈ ತೀರ್ಪು ನೀಡಿದ್ದು, ದಂಡ ಪಾವತಿಸಲು ವಿಫಲವಾದರೆ ಮತ್ತೊಂದು ವರ್ಷ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು ಎಂದಿದ್ದಾರೆ.