
ಬೆಂಗಳೂರಿನ ಭಟ್ಟರಹಳ್ಳಿ ಜಂಕ್ಷನ್ ಬಳಿ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್ಐ ನಯನಾ ಅವರ ಮೇಲೆ ನಾಲ್ವರು ವ್ಯಕ್ತಿಗಳು ಹಲ್ಲೆ ನಡೆಸಿ ಬಾಡಿ ಶೇಮಿಂಗ್ ಮಾಡಿ ಅವಮಾನಿಸಿದ್ದಾರೆ.
ಹೇಮಂತ್ ರೆಡ್ಡಿ, ರಾಧಾಕೃಷ್ಣ ರೆಡ್ಡಿ, ಹರ್ಷಿತ್ ರೆಡ್ಡಿ ಮತ್ತು ರಾಹುಲ್ ಎಂಬುವವರ ವಿರುದ್ಧ ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಘಟನೆಯು ಪಿಎಸ್ಐ ಅವರ ಬಾಡಿವೋರ್ನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.