
ದೆಹಲಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದು, ದಕ್ಷಿಣ ದೆಹಲಿಯ ಮೆಹ್ರೌಲಿ-ಬದರ್‌ಪುರ ರಸ್ತೆಯ ವಾಯುಸೇನಾ ಬಾದ್ ಬಳಿ 3ರಿಂದ 4 ಅಡಿಗಳಷ್ಟು ನೀರು ಶೇಖರಣೆಯಾಗಿದೆ.
ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಮಿಲಿಟರಿ ಸಿಬ್ಬಂದಿ ಹೆವಿ ಟ್ರಕ್‌ಗಳನ್ನು ಬಳಸಿ ಸಂಕಷ್ಟದಲ್ಲಿದ್ದ ಜನರಿಗೆ ಸಹಾಯ ಮಾಡುತ್ತಿರುವುದು ಕಂಡುಬಂದಿದೆ.
ಭಾರತೀಯ ಹವಾಮಾನ ಇಲಾಖೆಯ (IMD) ವರದಿ ಪ್ರಕಾರ, ಈ ವೀಕೆಂಡ್‌ನಲ್ಲಿ ದೆಹಲಿಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.