
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಸೈಫ್ ಮುಲ್ಲಾ (29), ಅವರ ಪುತ್ರಿ ಸಿಜಾ ಸೈಫ್ ಮುಲ್ಲಾ (4) ಮತ್ತು ಸ್ನೇಹಿತ ಇಮ್ತಿಯಾಜ್ ಬಡಗಾಂವ್ (35) ಎಂದು ಗುರುತಿಸಲಾಗಿದ್ದು, ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರಾ ತಾಲೂಕಿನ ಮೇಲ್ಕುಂಟೆ ಗೇಟ್ ಬಳಿ ನಡೆದ ಮತ್ತೊಂದು ಸರಣಿ ಅಪಘಾತದಲ್ಲಿ ಬೈಕ್ ಸವಾರ ಇಮ್ರಾನ್ (23) ಮೃತಪಟ್ಟಿದ್ದು, ನವಾಜ್ ಮತ್ತು ಅಲ್ಲಾಭಕ್ಷ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.