
ಕರ್ನಾಟಕದ ವಿವಿಧ ಭಾಗಗಳಲ್ಲಿ ಅಕ್ಟೋಬರ್ 9ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಅಕ್ಟೋಬರ್ 13ರವರೆಗೆ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮನ್ನಾರ್ ಕೊಲ್ಲಿಯಿಂದ ದಕ್ಷಿಣ ಒಳನಾಡು ಮೂಲಕ ಉತ್ತರ ಒಳನಾಡು ಕರ್ನಾಟಕದವರೆಗೆ ವಿಸ್ತರಿಸಿರುವ ವಾಯುಭಾರ ಕುಸಿತದ ಪಟ್ಟಿಯಿಂದಾಗಿ ಈ ಮಳೆ ಮುನ್ಸೂಚನೆ ನೀಡಲಾಗಿದೆ.
ರಾಜ್ಯದ 14 ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರಗಳನ್ನು ಹವಾಮಾನ ಇಲಾಖೆ ಮತ್ತು ಜಲಮಂಡಳಿ ಬಿಡುಗಡೆಗೊಳಿಸಿವೆ.