
ಕರ್ನಾಟಕದ ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ಕೇಂದ್ರ ಜಲ ಆಯೋಗವು ತಿರಸ್ಕರಿಸಿ ವಾಪಸ್ ಕಳುಹಿಸಿದ್ದು, ರಾಜ್ಯಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದೆ.
ಯೋಜನೆಯಲ್ಲಿ ಹೆಚ್ಚುವರಿ 2.2 ಟಿಎಂಸಿ ನೀರು ಸಂಗ್ರಹದ ಪ್ರಸ್ತಾವನೆಯು ಕಾವೇರಿ ಜಲವಿವಾದ ನ್ಯಾಯಮಂಡಳಿ ಮತ್ತು ಸುಪ್ರೀಂ ಕೋರ್ಟ್‌ನ 2018ರ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಆಯೋಗ ತಿಳಿಸಿದೆ.
ಒಟ್ಟು 6.90 ಟಿಎಂಸಿ ನೀರು ಸಂಗ್ರಹದ ಪ್ರಸ್ತಾವನೆಗೆ ಆಕ್ಷೇಪ ವ್ಯಕ್ತಪಡಿಸಿರುವ ಆಯೋಗ, ಯಾವುದೇ ನಿಯಮ ಉಲ್ಲಂಘನೆಯಾಗದಂತೆ ಹೊಸ ಡಿಪಿಆರ್ ಸಲ್ಲಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.