
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ಅಧಿಕೃತ ಆದೇಶ ಇನ್ನೂ ಹೊರಬಂದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಇಂದು ಸಂಜೆಯೊಳಗೆ ಆದೇಶ ಪ್ರಕಟವಾಗುವ ನಿರೀಕ್ಷೆಯಿದ್ದು, ಅದನ್ನು ಪರಿಶೀಲಿಸಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಹಿಂದೆ ಈ ಪ್ರಕರಣವನ್ನು ಸಿಐಡಿ ಮತ್ತು ನಂತರ ಸಿಬಿಐಗೆ ವಹಿಸಲಾಗಿದ್ದು, ಸಿಬಿಐ ತನಿಖೆ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ.