
ಮನೆ ಮುಂದೆ ಸ್ವಂತ ವಾಹನ ನಿಲ್ಲಿಸುವುದಕ್ಕೆ ಶುಲ್ಕ ವಿಧಿಸುವ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರೂಪಿಸಿದ್ದ ಪ್ರಸ್ತಾವನೆಗೆ ನಗರಾಭಿವೃದ್ಧಿ ಇಲಾಖೆ ತಡೆ ನೀಡಿದೆ.
ಸಾರ್ವಜನಿಕರಿಂದ ತೀವ್ರ ವಿರೋಧ ಹಾಗೂ ಸಾವಿರಾರು ಆಕ್ಷೇಪಣೆಗಳು ಸಲ್ಲಿಕೆಯಾದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ತಡೆಯಿಂದಾಗಿ ಮನೆ ಮುಂದೆ ವಾಹನ ನಿಲುಗಡೆಗೆ ಶುಲ್ಕ ಪಾವತಿಸಬೇಕಾಗಬಹುದು ಎಂಬ ಆತಂಕದಲ್ಲಿದ್ದ ವಾಹನ ಮಾಲೀಕರಿಗೆ ತಾತ್ಕಾಲಿಕ ನಿರಾಳತೆ ಸಿಕ್ಕಿದೆ.