
ಆಗಸ್ಟ್ 22ರಂದು ಹೈದರಾಬಾದ್‌ನ ಮಲ್ಲಾರೆಡ್ಡಿ ಯೂನಿವರ್ಸಿಟಿ ಮೈದಾನದಲ್ಲಿ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಅದ್ಧೂರಿಯಾಗಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ನಟ ಯಶ್ ಜೊತೆಗೆ ಕಿಯಾರಾ, ರುಕ್ಮಿಣಿ, ಹುಮಾ ಮತ್ತು ನಿರ್ಮಾಪಕ ದಿಲ್ ರಾಜು ಸೇರಿದಂತೆ ಹಲವು ಸೆಲೆಬ್ರಿಟಿಗಳು ಭಾಗವಹಿಸಿದ್ದರು.
ಪರಭಾಷೆಯ ನೆಲದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದು, ಯಶ್ ಅವರನ್ನು ಕಣ್ತುಂಬಿಕೊಂಡರು.