ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಜಮಿಯಾ ಸಮಿತಿ ಅಧ್ಯಕ್ಷ ಮುದಾಸಿರ್ ಪಾಷ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.
ಭಾನುವಾರ ಚಿಕ್ಕಮಗಳೂರಿನ ಸಿ.ಟಿ. ರವಿ ಅವರ ನಿವಾಸಕ್ಕೆ ನೋಟಿಸ್ ನೀಡಲು ತೆರಳಿದ ಪೊಲೀಸರ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಅಂಟಿಸಿದ್ದ ನೋಟಿಸ್ ಅನ್ನು ಕಿತ್ತುಹಾಕಿದರು.
ಯೂತ್ ಫಾರ್ ನೇಷನ್ ಪ್ರತಿಭಟನಾ ಸಭೆಯಲ್ಲಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಅವಹೇಳನಕಾರಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.