
ಬಿಜೆಪಿಯ ಮಾಜಿ ಸಂಸದೆ ಸುಧಾ ಯಾದವ್ ಅವರನ್ನು ಕರ್ನಾಟಕದ ಹೊಸ ರಾಜ್ಯಪಾಲರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಿಸಿದ್ದಾರೆ.
ಯಾದವ್ ಅವರು ರೂರ್ಕಿ ವಿಶ್ವವಿದ್ಯಾಲಯದಿಂದ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಹಾಗೂ ಪಿಎಚ್ಡಿ ಪದವಿ ಪಡೆದಿದ್ದು, 1999ರಿಂದ 2004ರವರೆಗೆ ಹರಿಯಾಣದ ಮಹೇಂದ್ರಗಢ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ಸುಧಾ ಯಾದವ್ ಅವರಿಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅಭಿನಂದಿಸಿದ್ದಾರೆ.