
ಮಂಗಳೂರು ರೈಲ್ವೆ ನಿಲ್ದಾಣವನ್ನು ಪಾಲಕ್ಕಾಡ್ ವಿಭಾಗದಿಂದ ವಿಭಜಿಸಿ ಮೈಸೂರು ವಿಭಾಗಕ್ಕೆ ಸೇರಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಗತಿಸಿದೆ.
ರೈಲ್ವೆ ಸಚಿವ ವಿ. ಸೋಮಣ್ಣ ಮತ್ತು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪ್ರಯತ್ನವನ್ನು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಟಿ.ಎ. ಶ್ಲಾಘಿಸಿದ್ದಾರೆ.
ಈ ನಿರ್ಧಾರವನ್ನು ವಿರೋಧಿಸುತ್ತಿರುವ ಕೇರಳದ ರಾಜಕಾರಣಿಗಳ ವಿರುದ್ಧ ಕರ್ನಾಟಕದ ನಾಯಕರು ಒಗ್ಗಟ್ಟಾಗಿ ನಿಲ್ಲಬೇಕು ಎಂದು ಕರವೇ ಆಗ್ರಹಿಸಿದೆ.