
ಅಯೋಧ್ಯೆಯ ಶ್ರೀ ರಾಮಮಂದಿರ ಟ್ರಸ್ಟ್ನ ಆಡಳಿತದಲ್ಲಿ ಪಾರದರ್ಶಕತೆ ತರಲು ಭಾರತೀಯ ವಾಯುಪಡೆಯ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು ಮೊದಲ ಪೂರ್ಣಾವಧಿ ಸಿಇಒ ಆಗಿ ನೇಮಿಸಲಾಗಿದೆ.
ಸುಮಾರು 5000ಕ್ಕೂ ಹೆಚ್ಚು ಅರ್ಜಿಗಳನ್ನು ಪರಿಶೀಲಿಸಿದ ನಂತರ, 40 ವರ್ಷಗಳ ಸೇವಾ ಅನುಭವ ಹೊಂದಿರುವ ಫೈಟರ್ ಪೈಲಟ್ ಜಿತೇಂದ್ರ ಮಿಶ್ರಾ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗಿದೆ.
ದೇವಾಲಯದ ಹುಂಡಿ ಕಳ್ಳತನ ಮತ್ತು ದೇಣಿಗೆ ಅಕ್ರಮಗಳ ಆರೋಪಗಳ ಹಿನ್ನೆಲೆಯಲ್ಲಿ, ಮಿಲಿಟರಿ ಶಿಸ್ತು ಹೊಂದಿರುವ ಮಿಶ್ರಾ ಅವರ ನೇಮಕವು ಆಡಳಿತಕ್ಕೆ ಹೊಸ ದೃಷ್ಟಿಕೋನ ನೀಡಲಿದೆ.