
ದಾವಣಗೆರೆ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಮುಖ್ಯ ಕಟ್ಟಡದ ಮೇಲ್ಚಾವಣಿ ಕುಸಿದು ಮಗು ಸೇರಿದಂತೆ ಮೂವರು ಗಾಯಗೊಂಡಿದ್ದು, ಕಟ್ಟಡವು ಸಂಪೂರ್ಣ ಶಿಥಿಲಗೊಂಡಿದೆ.
ಅರ್ಧ ಶತಮಾನಕ್ಕೂ ಹಳೆಯದಾದ ಈ ಕಟ್ಟಡವು ಬಳಕೆಗೆ ಯೋಗ್ಯವಾಗಿಲ್ಲ ಎಂದು ತಜ್ಞರ ಸಮಿತಿ ವರದಿ ನೀಡಿದ್ದರೂ, ಅನಿವಾರ್ಯವಾಗಿ ರೋಗಿಗಳಿಗೆ ಅದೇ ಕಟ್ಟಡದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಹಳೆಯ ಕಟ್ಟಡವನ್ನು ಕೆಡವಿ 7 ಎಕರೆ ಪ್ರದೇಶದಲ್ಲಿ ಹೊಸ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ.