
ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ 24 ಎಇಇಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ನ್ಯಾಯಾಲಯದ ಆದೇಶವಿದ್ದರೂ ತರಾತುರಿಯಲ್ಲಿ ನೇಮಕಾತಿ ನಡೆಸಲಾಗಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ, ಈ ಸಂಬಂಧ ಒಎಮ್‌ಆರ್ ಶೀಟ್ ಮತ್ತು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
ಆರೋಪಗಳಿಗೆ ತಿರುಗೇಟು ನೀಡಿರುವ ಪ್ರಿಯಾಂಕ್ ಖರ್ಗೆ, ಜೆಡಿಎಸ್ ಮತ್ತು ಬಿಜೆಪಿಯಿಂದ ತಾನು ಕಲಿಯಬೇಕಾದ್ದೇನೂ ಇಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.