
ಉಡುಪಿ ಜಿಲ್ಲೆಯ 5 ಬಿ.ಆರ್.ಸಿ. ಕೇಂದ್ರಗಳಲ್ಲಿ ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿಗಳ 5 ಹುದ್ದೆಗಳನ್ನು ಭರ್ತಿ ಮಾಡಲು ಸೆಪ್ಟೆಂಬರ್ 2ರವರೆಗೆ ಅರ್ಜಿ ಆಹ್ವಾನಿಸಲಾಗಿದೆ.
ಮನೋವಿಜ್ಞಾನದಲ್ಲಿ ಎಂಎ ಅಥವಾ ಎಂಎಸ್ಸಿ ಪದವಿ ಪಡೆದ 28 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ಮಾಸಿಕ 50,000 ರೂಪಾಯಿ ಗೌರವಧನ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಮಣಿಪಾಲದ ರಜತಾದ್ರಿಯಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯನ್ನು ಅಥವಾ 0820-2575383 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.