
ದೆಹಲಿಯ ಸಂಸತ್ ಭವನದ ನಾರ್ತ್ ಬ್ಲಾಕ್ನಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.
ಪ್ರಾಥಮಿಕ ವರದಿಗಳ ಪ್ರಕಾರ ವೆಲ್ಡಿಂಗ್ ಕಾರ್ಯದ ವೇಳೆ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದ ಕಿಡಿ ಹಾರಿ ಬೆಂಕಿ ಹೊತ್ತಿಕೊಂಡಿದ್ದು, ದಟ್ಟವಾದ ಹೊಗೆ ಆವರಿಸಿಕೊಂಡಿತ್ತು.
ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಘಟನಾ ಸ್ಥಳಕ್ಕೆ ಧಾವಿಸಿದ ಆರು ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.