
ಸಚಿವ ಸಂಪುಟ ವಿಸ್ತರಣೆಯಲ್ಲಿ ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ, ಅವರ ಬೆಂಬಲಿಗರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯ ಭಾಗವಾಗಿ ಆಗಸ್ಟ್ 5ರಂದು ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರು ಎಂಬ ಮೂರು ತಾಲೂಕುಗಳಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಬಂದ್‌ಗೆ ಕರೆ ನೀಡಲಾಗಿದೆ.
ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ನರೇಂದ್ರ ಸೇರಿದಂತೆ ಹಲವು ಪದಾಧಿಕಾರಿಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದು, ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.