
ಪ್ರಧಾನಿ ಮೋದಿ ವಿದೇಶಿ ಶಕ್ತಿಗಳ ನೆರವಿನಿಂದ ಅಧಿಕಾರಕ್ಕೆ ಬಂದಿದ್ದಾರೆ ಎಂಬ ರಾಹುಲ್ ಗಾಂಧಿ ಅವರ ಆರೋಪಕ್ಕೆ ಕೇಂದ್ರ ಸಚಿವ ಕಿರಣ್ ರಿಜಿಜು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ ಭಾರತದ ಶತ್ರುಗಳ ಅಜೆಂಡಾವನ್ನು ದೇಶದೊಳಗೆ ಮುನ್ನಡೆಸುತ್ತಿದ್ದಾರೆ ಎಂದು ಟೀಕಿಸಿರುವ ರಿಜಿಜು, ಉನ್ನತ ಮಟ್ಟದ ಚರ್ಚೆಗಳು ಪ್ರಬುದ್ಧ ವ್ಯಕ್ತಿಗಳ ನಡುವೆ ಮಾತ್ರ ನಡೆಯುತ್ತವೆ ಎಂದು ಹೇಳಿದ್ದಾರೆ.
ಮೋದಿ ವಿರುದ್ಧ ಬಹಿರಂಗ ಚರ್ಚೆಗೆ ಬರುವಂತೆ ರಾಹುಲ್ ಗಾಂಧಿ ಹಾಕಿದ್ದ ಸವಾಲನ್ನು ಸಚಿವರು ತಳ್ಳಿಹಾಕಿದ್ದು, ವಿರೋಧ ಪಕ್ಷವು ಪ್ರಗತಿಗೆ ಅಡ್ಡಿಪಡಿಸುವ ತಡೆಗೋಡೆಯಾಗಿ ಬದಲಾಗಿದೆ ಎಂದು ಆರೋಪಿಸಿದ್ದಾರೆ.