
2028ರ ಸೆಪ್ಟೆಂಬರ್ 7ರಿಂದ ಅಕ್ಟೋಬರ್ 1ರವರೆಗೆ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಆತಿಥ್ಯ ವಹಿಸುವ ಸಾಧ್ಯತೆಯಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜಕೀಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಭಾರತ ತಂಡದ ಪಂದ್ಯಗಳಿಗೆ ಹೈಬ್ರಿಡ್ ಮಾದರಿ ಮುಂದುವರಿಯುವ ನಿರೀಕ್ಷೆಯಿದೆ.
ಭಾರತದ ಪಂದ್ಯಗಳನ್ನು ಯುಎಇಯ ದುಬೈ ತಟಸ್ಥ ತಾಣದಲ್ಲಿ ನಡೆಸುವ ಕುರಿತು ಚರ್ಚೆ ನಡೆಯುತ್ತಿದ್ದು, ಐಸಿಸಿಯ ಅಂತಿಮ ನಿರ್ಧಾರ ಬಾಕಿ ಇದೆ.