
ವಿಜಯಪುರ ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಪಡಿತರ ಧಾನ್ಯಗಳ ಅಕ್ರಮ ಸಾಗಣೆ ತಡೆಯಲು ಕೈಗೊಂಡ ಕಾರ್ಯಾಚರಣೆಯಲ್ಲಿ ಜನವರಿಯಿಂದ ಅಕ್ಟೋಬರ್ ವರೆಗೆ ಒಟ್ಟು 45 ಪ್ರಕರಣಗಳನ್ನು ದಾಖಲಿಸಲಾಗಿದೆ.
ಅಧಿಕಾರಿಗಳು ದಾಳಿ ನಡೆಸಿ ಒಟ್ಟು 3,894 ಕ್ವಿಂಟಲ್ ಅಕ್ಕಿ ಹಾಗೂ 95 ಕ್ವಿಂಟಲ್ ಗೋಧಿಯನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ ₹93,91,104 ಹಾಗೂ ಗೋಧಿಯ ಮೌಲ್ಯ ₹2,42,505 ಆಗಿದ್ದು, ಅಕ್ರಮಕ್ಕೆ ಬಳಸಿದ ವಾಹನಗಳ ಜತೆಗೆ ಅಗತ್ಯ ವಸ್ತುಗಳ ಕಾಯ್ದೆ-1955ರಡಿ ಪ್ರಕರಣ ದಾಖಲಿಸಲಾಗಿದೆ.